Sunday, April 7, 2024

ಹವಾಮಾನ

 ಬಿಸಿಲಿನ ಧಗೆಯಿಂದ ಕಂಗೆಟ್ಟ ಜನಕ್ಕೆ ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ!


ಬೆಂಗಳೂರು: ಕರ್ನಾಟಕದಲ್ಲಿ ಭಾರೀ ಬಿಸಿಲ ಧಗೆಗೆ ಜನ ಕಂಗೆಟ್ಟಿದ್ದಾರೆ. ಕೂಲಿ ಕಾರ್ಮಿಕರ ಸ್ಥಿತಿಯಂತೂ ಹೇಳತೀರದು. ಬಿಸಿಲಿನ ತೀವ್ರತೆ ನೋಡಿದರೆ ಮೈಯನ್ನು ಸುಡುವಷ್ಟು ತೀವ್ರವಾಗಿದೆ. ಒಮ್ಮೆ ಮಳೆ ಬಂದರೆ ಸಾಕು ಅನ್ನುವಂತೆ ಜನ ಕಾಯುತ್ತಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಜನರಿಗೆ ಸಂತಸದ ಸುದ್ದಿ ನೀಡಿದೆ.

ಹೌದು… ಇಂದಿನಿಂದ ರಾಜ್ಯದ 14 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಏಪ್ರಿಲ್ 9 ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರದಲ್ಲಿ ಹಗುರ ಮಳೆಯಾಗಲಿದೆ.

ಮುಂದಿನ 2 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತಷ್ಟು ಹೆಚ್ಚಾಗಲಿದೆ. ಬೀದರ್, ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಹಾವೇರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಎಚ್ಎಎಲ್ನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 38.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 39.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

  Blog chatgpt Blog